ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ.

ಮಂಡ್ಯ: ನಡು ರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿದ ಘಟನೆ ಮಂಡ್ಯದ ಗಾಂಧಿನಗರ 4ನೇ ಕ್ರಾಸ್ನಲ್ಲಿ ನಡೆದಿದೆ.
ಅಕ್ಷಯ್ ಅಲಿಯಾಸ್ ಗಂಟ್ಲು (22) ನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ಅಕ್ಷಯ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಳಿಕ ಅಕ್ಷಯ್ ಪ್ರಾಣವನ್ನು ಉಳಿಸಿಕೊಳ್ಳಲು ಅಲ್ಲಿಂದ ಕಾಲ್ಕಿತ್ತಿದ್ದಾನೆ. ತಪ್ಪಿಸಿಕೊಳ್ಳಲು ಮನೆಯ ಕಾಂಪೌಂಡ್ ಒಳಗೆ ನುಗ್ಗಿದರೂ ಬೆನ್ನತ್ತಿ ದಾಳಿ ನಡೆಸಿದ್ದಾರೆ. ಸುಮಾರು 100 ಮೀಟರ್ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಅಕ್ಷಯ್ ಹತ್ಯೆ ಮಾಡಿದ್ದಾರೆ.

ಮಾರಕಾಸ್ತ್ರಗಳ ದಾಳಿಗೆ ಅಕ್ಷಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೇ ದ್ವೇಷಕ್ಕೆ ಯುವಕ ಅಕ್ಷಯ್ನನ್ನು ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು ಘಟನಾ ಸ್ಥಳಕ್ಕೆ ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
ಐವರು ಹಂತಕರಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.