ಬೆಂಗಳೂರುಸುವರ್ಣ ಗಿರಿ ಟೈಮ್ಸ್

ಕರ್ನಾಟಕ ಬಂದ್ ಗೆ ಕರೆ: ಕರವೇ ಕಾರ್ಯಕರ್ತರನ್ನು ವಶಕ್ಕೆ.

ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.

ಅದರಂತೆ ಇಂದು(ಸೆ.29) ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಈ ಹಿನ್ನಲೆ ಬೆಳಿಗ್ಗೆಯಿಂದಲೇ ಬಂದ್ ಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಅದರಂತೆ ಇದೀಗ ಕರವೇ ಕಾರ್ಯಕರ್ತರು ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ಏರ್ಪೋರ್ಟೆ್ಗ ಮುತ್ತಿಗೆ ಹಾಕಿದ್ದಾರೆ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಕರವೇ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಕೈಲಿಡಿದು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಇದೀಗ 20 ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದು, ಎಲ್ಲರನ್ನೂ ಕಾರುಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.

ಇನ್ನು ಬಂದ್ ಹಿನ್ನೆಲೆ ಕೆ.ಆರ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಆಗುತ್ತಿಲ್ಲ. ಹೀಗಾಗಿ ವ್ಯಾಪಾರಸ್ಥರು ಹೂಗಳನ್ನು ದಾರಿಗೆ ಎಸೆದು ಹೋಗುತ್ತಿದ್ದಾರೆ. ಹೌದು, ಕಡಿಮೆ ಬೆಲೆ ಕೊಡುವುದಕ್ಕೆ ಮುಂದಾದರೂ ಜನರು ಹೂಗಳನ್ನ ಖರೀದಿ ಮಾಡುತ್ತಿಲ್ಲ. ಜೊತೆಗೆ ಗ್ರಾಹಕರು ಮಾರ್ಕೆಟ್?ಗೆ ಬಂದಿಲ್ಲ. ಈ ಹಿನ್ನಲೆ ವ್ಯಾಪರ ವಿಲ್ಲದೇ ಮನೆಗಳಿಗೆ ಹೋಗುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button