ಬೆಂಗಳೂರುಸುವರ್ಣ ಗಿರಿ ಟೈಮ್ಸ್

“ಯುಪಿಎಸ್‌ಸಿ: ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ

ಬೆಂಗಳೂರು: ಕೇಂದ್ರ ಲೋಕಾಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮ ವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದೆಹಲಿ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿ ಬೇಡಿಕೆ ಸಲ್ಲಿಸಿದ್ದಾರೆ. ಅವರಿಗೆ ಅನುಕೂಲ ವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು. ಸಂಬಂಧ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ವರದಿ ಸಿದ್ಧಪಡಿಸುವಂತೆ ನಿರ್ದೇಶನ ನೀಡಿದರು.

ಬಜೆಟ್ ನಲ್ಲಿ ಇಲಾಖೆಗೆ ನೀಡಲಾಗಿರುವ ಹಣವನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು. ಮಾರ್ಚ್ ವೇಳೆಗೆ ಶೇ 100ರಷ್ಟು ಗುರಿ ಸಾಧಿಸಬೇಕು. ಮಾರ್ಚ್ ತಿಂಗಳವರೆಗೆ ಹಣ ಉಳಿಸಿಕೊಂಡು ತರಾತುರಿಯಲ್ಲಿ ಹಣ ವ್ಯಯಿಸುವ ಕೆಲಸ ಅಗಬಾರದು. ಅವಧಿಗೂ ಮುನ್ನ ಬಳಕೆ ಮಾಡಿದರೆ ಮುಖ್ಯಮಂತ್ರಿಗಳ ಬಳಿ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾ ಗುವುದು ಎಂದು ಪ್ರತಿಕ್ರಿಯಿಸಿದರು.

Related Articles

Leave a Reply

Your email address will not be published. Required fields are marked *

Back to top button