Dharwad

20ಕ್ಕೆ ಚುನಾವಣೆ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಯಾರಾಗ್ತಾರೆ ಮೇಯರ್?

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿ ಪಡಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಅಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಸುನೀಲಕುಮಾರ ಅವರು ತಿಳಿಸಿದ್ದಾರೆ.

ಧಾರವಾಡ (ಜೂ.7) : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿ ಪಡಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣಯ ಅಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಸುನೀಲಕುಮಾರ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ 20, 2023 ರಂದು ಮುಂಜಾನೆ 9 ರಿಂದ 11 ಗಂಟೆಯವರೆಗೆ ಧಾರವಾಡದ ಪಾಲಿಕೆಯ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಭಾಭವನದಲ್ಲಿ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಮತ್ತು ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭಿಸಲಾಗುವುದು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು 22ನೇ ಅವಧಿಯ ಚುನಾವಣೆಗೆ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿಯನ್ನು ನಿಗದಿಗೊಳಿಸಲಾಗಿದೆ.

ಮಹಾಪೌರ ಮತ್ತು ಉಪಮಹಾಪೌರ ಸ್ಥಾನಕ್ಕೆ ನಡೆಯುವ ಚುನಾವಣೆ ಪ್ರಕ್ರಿಯೆಯಲ್ಲಿ ಸ್ವೀಕರಿಸಿದ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಯನ್ನು ಹಿಂತೆಗೆದುಕೊಳ್ಳುವುದು ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡುವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸುವುದು, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button