ಮಹಾನಗರ ಮಾಲಿಕೆಯಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆ:
ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆಯ ಸಮರ್ಪಕ ಅನುಷ್ಠಾನ ಕುಡಿಯುವ ನೀರು ಸರಬರಾಜು; ಆರೋಗ್ಯ ಸೌಲಭ್ಯ ಕಸ ವಿಲೇವಾರಿ; ಸ್ಮಶಾನ ಅಭಿವೃದ್ಧಿ ಮೂಲಸೌಕರ್ಯ ಒದಗಿಸುವದು. ಸೇರಿದಂತೆ ಎಲ್ಲ ಕೆಲಸಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣ ಗೊಳಿಸುವುದು ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಣಾಮವಕಾರಿಯಾಗಿ ಕೆಲಸ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸೂಚನೆ ನೀಡಿದರು.

ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬುಧವಾರ ನಡೆದ ಸ್ಮಾರ್ಟ್ ಸಿಟಿ, ಕುಡಿಯುವ ನೀರು ಸರಬರಾಜು. ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಜನರ ಸಮಸ್ಯೆಗಳನ್ನು ಅರಿತುಕೊಂಡು ಅವುಗಳನ್ನು ಪರಿಹರಿಸುವದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಸ್ಮಾರ್ಟ್ ಸಿಟಿ,ಹೆಸ್ಕಾಂ ಸೇರಿದಂತೆ ಪ್ರಮುಖ ಇಲಾಖೆಯ ಪ್ರತ್ಯೇಕವಾದ ಸಭೆ ನಡೆಸಲಾಗುವುದು.ಅಧಿಕಾರಿಗಳಿಗೆ ಸ್ವಲ್ಪಮಟ್ಟಿಗೆ ಸಮಯ ನೀಡಲಾಗುವುದು ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಉತ್ತಮ ಕಲಸ ಮಾಡಬೇಕು.ಮಹಾನಗರ ಪಾಲಿಕೆಯ ಸದಸ್ಯರು ತಿಳಿಸಿದ ಕೆಲಸಗಳನ್ನು ಆದ್ಯತೆ ಮೇರೆಗೆ ಮಾಡಬೇಕು ಎಂದರು.