Karnataka newssuvarna giri times
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ.
ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಘೋಷಿಸಿದ್ದ ಪ್ರಣಾಳಿಕೆಯಲ್ಲಿ ಐದು ‘ಗ್ಯಾರಂಟಿ’ಗಳ ಪೈಕಿ, ಒಂದು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ‘ಶಕ್ತಿ’ ಯೋಜನೆ ರಾಜ್ಯದಾದ್ಯಂತ ಸರ್ಕಾರ ಭಾನುವಾರ (ಜೂನ್ 11) ಚಾಲನೆ ನೀಡಲ್ಲಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1.00 ಗಂಟೆಯ ನಂತರ ಎಲ್ಲ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಸಿಗಲಿದೆ.
ಇದೇ ಸಂದರ್ಭದಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನಸಭಾ ಸ್ಥಳೀಯ ಶಾಸಕರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.
‘ಬಡ ಮತ್ತು ಮಧ್ಯಮವರ್ಗದ ದುಡಿಯುವ ಮಹಿಳೆಯರ ದಿನದ ಖರ್ಚಿನ ಹೊರೆಯನ್ನು ಇಳಿಸಿ, ಮಹಿಳಾ ಸಬಲೀಕರಣಕ್ಕೆ ಈ ಯೋಜನೆ ಹೊಸ ಭಹುಷ್ಯ ಬರೆಯಲಿದೆ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.