“ಖಾಸಗಿ, ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳಲ್ಲೂ ಸಂವಿಧಾನದ ಪೀಠಿಕೆ ಓದಬೇಕು ಸರ್ಕಾರ ಆದೇಶ
ಬೆಂಗಳೂರು: ಜೂ.15- ಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಪ್ರಾರ್ಥನೆ ಸಂದರ್ಭದಲ್ಲಿ ಸಂವಿಧಾನದ ಪೀಠಕೆ ಓದುವುದನ್ನು ಜಾರಿಗೆ ತರಲು ಇಂದು ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಮಹದೇವಪ್ಪ ಅವರು, ಖಾಸಗಿ, ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳಲ್ಲೂ ಸಂವಿಧಾನದ ಪೀಠಕೆ ಓದಬೇಕು, ಹೀಗಾಗಿ ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದರು.
ಪ್ರತಿಯೊಬ್ಬರೂ ಪರಸ್ಪರ ಸಮಾನತೆ, ಪ್ರೀತಿ, ಸೋದರತ್ವದಿಂದ ಇರಬೇಕು ಎಂಬ ಉದ್ದೇಶದಿಂದ ಸಂವಿಧಾನದ ಪೀಠಿಕೆ ಓದುವುದನ್ನು ಜಾರಿಗೆ ತರುತ್ತಿದ್ದೇವೆ. ಇದರಿಂದ ನೈತಿಕತೆಯ ಮಟ್ಟ ಹೆಚ್ಚಾಗುವುದಲ್ಲದೆ, ಎಲ್ಲಾ ಜಾತಿ, ಧರ್ಮವನ್ನು ಸಮಾನ ದೃಷ್ಟಿಯಿಂದ ಕಾಣುವಂತಾಗುತ್ತದೆ. ಇದನ್ನು ಪ್ರತಿ ದಿನ ಕಡ್ಡಾಯವಾಗಿ ಓದಬೇಕು. ಅದೇ ರೀತಿ ಗ್ರಾಪಂ, ತಾಪಂ, ಪುರಸಭೆ, ಪಟ್ಟಣ ಪಂಚಾಯ್ತಿಸ ಸೇರಿದಂತೆ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆಯ ಫೋಟೋವನ್ನು ಹಾಕಬೇಕು ಎಂದು ಡಾ.ಎಚ್.ಮಹದೇವಪ್ಪ ರವರು ಪ್ರತಿಕ್ರಿಯಿಸಿದರು.