suvarna giri timesಮಹಾರಾಷ್ಟ್ರಮುಂಬೈ
ಮಹಾರಾಷ್ಟ್ರ ಡಿಸಿಎಂ ಆಗಿ ‘ಅಜಿತ್ ಪವಾರ್’ ಪ್ರಮಾಣವಚನ ಸ್ವೀಕಾರ.
ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಎನ್. ಸಿ.ಪಿ. ಯ ಶರದ್ ಪವಾರ್ ವಿರುದ್ಧ ಸಿಡಿದೆದ್ದಿರುವ ಅಜಿತ್ ಪವಾರ್ ಬಣ, ಬಿಜೆಪಿ-ಶಿವಸೇನೆ ಮಹಾಮೈತ್ರಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಅಲ್ಲದೇ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಣೆ ಮಾಡಿರುವ ಬೆನ್ನಲ್ಲೇ ಶಿಂಧೆ, ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾರ್ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಅಜಿತ್ ಪವಾರ್ ಮತ್ತೊಮ್ಮೆ ಮಹಾರಾಷ್ಟ್ರ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಅಜಿತ್ ಪವಾರ್ ತನಗೆ 21 ಶಾಸಕರ ಬೆಂಬಲವಿರುವುದಾಗಿ ರಾಜ್ಯಪಾಲರ ಬಳಿ ತಿಳಿಸಿದ್ದಾರೆ ಎನ್ನಲಾಗಿದೆ. ಅಜಿತ್ ಪವಾರ್ ಜೊತೆ ಇನ್ನೂ 8 ಶಾಸಕರು ಸಚಿವರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದರು.