ಬೆಂಗಳೂರುಸುವರ್ಣ ಗಿರಿ ಟೈಮ್ಸ್
45 ಕಂದಾಯ ಕಚೇರಿಯ ಆರ್ ಒ, ಎ ಆರ್ ಒ, ಎಡಿಟಿಪಿ ಅಧಿಕಾರಿಗಳ ಕಚೇರಿ ಮೇಲೆ ದಿಢೀರ್ ದಾಳಿ: ಖುದ್ದು ಅಖಾಡಕ್ಕಿಳಿದ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್.

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಕಂದಾಯ ಅಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ಬೆಂಗಳೂರಿನ, ಜಯನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ, ಯಲಹಂಕ, ಬ್ಯಾಟರಾಯನಪುರ, ಕೆ.ಆರ್.ಪುರಂ, ವಿದ್ಯಾರಣ್ಯಪುರ, ಮಹದೇವಪುರ ಸೇರಿದಂತೆ 45 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಖುದ್ದು ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರೇ ದಾಳಿಯಲ್ಲಿ ಭಾಗಿಯಾಗಿದ್ದು, ರಾಜಾಜಿನಗರದ ಕಂದಾಯ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಕಂದಾಯ ಅಧಿಕಾರಿ ಹೆಚ್.ಭಾರತಿಯವರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಮಾಡಿದ್ದಾರೆ. ಕಂದಾಯ ಕಚೇರಿಯ ಆರ್ ಒ, ಎಆರ್ ಒ, ಎಡಿಟಿಪಿ ಅಧಿಕಾರಿಗಳ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.