ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ಕೊಳಚೆ ಪ್ರದೇಶಗಳ ನಿವಾಸಿಗಳು.
ಧಾರವಾಡ : ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ನ್ಯಾಯ ದೊರಕಿಸಿಕೊಡಲು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಉತ್ತರ ಕರ್ನಾಟಕ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಕೊಳಚೆ ಪ್ರದೇಶಗಳ ಫಲಾನುಭವಿಗಳಿಗೆ ಮನೆಗಳನ್ನು ಕಟ್ಟಿ, ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಈ ಮನೆಗಳ ಆಸ್ತಿ ಕಾಲಂನಲ್ಲಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಹೆಸರು ನೊಂದಣಿ ಯಾಗಿದೆ. ಆದರೆ ಅನಾವಶ್ಯಕವಾಗಿ ಈ ಆಸ್ತಿ ಕಬಳಿಸುವ ಹುನ್ನಾರ ನಡೆಯುತ್ತಿದ್ದು, ನ್ಯಾಯಾಲ ಯದ ಧಾವೆ ಇದೆ ಎಂದು ಕೊಳಚೆ ನಿರ್ಮೂಲನಾ ಮಂಡಳಿ ಕಾಮಗಾರಿ ಸ್ಥಗಿತಗೊಳಿಸಿದೆ. ಇದರಿಂದ ಫಲಾನುಭವಿಗಳು ಮಾನಸಿಕವಾಗಿ ಆರ್ಥಿಕವಾಗಿ ನಷ್ಟ ಅನುಭವಿಸುವಂತಾಗಿದೆ ಈ ಕುರಿತು ಸರ್ಕಾರ ಎಚ್ಚೆತ್ತುಕೊಂಡು. ಕಾನೂನು ತೊಡಕು ನಿವಾರಣೆ ಮಾಡಬೇಕು ಹಾಗೂ ಫಲಾನುಭವಿಗಳಿಗೆ ಮನೆಗಳನ್ನು ಕಟ್ಟಿ ಹಕ್ಕುಪತ್ರ ವಿತರಣೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಸದಸ್ಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.