ಬೆಂಗಳೂರುಸುವರ್ಣ ಗಿರಿ ಟೈಮ್ಸ್ಸ್ಯಾಂಡಲ್ ವುಡ್
ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ನಿಧನ.
ಬೆಂಗಳೂರು: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಿಜಯ್ ರಾಘವೇಂದ್ರ ಹಾಗೂ ಸ್ಪಂದನ ಬ್ಯಾಂಕಾಕ್ ಹೋದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನ ಪ್ರೀತಿಸಿ ಮದುವೆ ಆದಂತ ಜೋಡಿ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ. ಬೆಂಗಳೂರಿಗೆ ನಾಳೆ ಸ್ಪಂದನ ಅವರ ಪಾರ್ಥಿವ ಶರೀರವನ್ನು ತರಲಾಗುವುದು ಎಂದಿದ್ದಾರೆ.
2016ರಲ್ಲಿ ಸ್ಪಂದನಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ವಿ. ರವಿಚಂದ್ರನ್ ನಿರ್ದೇಶನದ ‘ಅಪೂರ್ವ ಸಿನಿಮಾದಲ್ಲಿ ಸ್ಪಂದನಾ ನಟಿಸಿದ್ದರು. ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅವರ ಪತ್ನಿಯಾಗಿ ಅವರು ನಟಿಸಿದ್ದರು. ಈಗ ಸ್ಪಂದನಾ ಸಾವಿನ ಸುದ್ದಿಯನ್ನು ಅನೇಕರಿಂದ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ವಿಜಯ್ ಅವರಿಗೆ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದು ದೇವರಲ್ಲಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.