“ಬಿ.ಎಡ್ ಪದವಿ ಪಡೆದಿರುವ ಅಭ್ಯರ್ಥಿಗಳು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಹರಲ್ಲ: ಸುಪ್ರೀಂ ಕೋರ್ಟ್ ತೀರ್ಪು.
ನವದೆಹಲಿ: ಬಿ.ಎಡ್ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ನೇಮಕಾತಿಗೆ ಅನರ್ಹರು ಎಂದು ರಾಜಸ್ಥಾನ ಹೈಕೋರ್ಟ್ ನೀಡಿದ್ದ ತೀರ್ಪನ್ನು ಈಗ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯ ಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಭಾರತೀಯ ಸಂವಿಧಾನದ 21 ಎ ಮತ್ತು ಶಿಕ್ಷಣ ಹಕ್ಕು ಕಾಯಿದೆ, 2009 ರ ಅಡಿಯಲ್ಲಿ ಭಾರತದಲ್ಲಿ ಪ್ರಾಥಮಿಕ ಶಿಕ್ಷಣದ ಮೂಲಭೂತ ಹಕ್ಕನ್ನು ಖಾತರಿಪಡಿ ಸುತ್ತದೆ ಮತ್ತು ಇದು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಡ್ಡಾಯ ಮತ್ತು ಗುಣಮಟ್ಟದ’ ಶಿಕ್ಷಣವನ್ನು ಒಳಗೊಂಡಿದೆ ಎಂದು ಅಭಿಪ್ರಾಯ ಪಟ್ಟಿದೆ.
ಸುಪ್ರೀಂ ಕೋರ್ಟ್ ಪ್ರಕಾರ, ಬಿ.ಎಡ್. ಪದವಿ ಪಡೆದವರು ಪ್ರಾಥಮಿಕ ತರಗತಿಗಳಿಗೆ ಬೋಧನೆಗೆ ಅಗತ್ಯವಾದ ಮೂಲಭೂತ ಶಿಕ್ಷಣದ ಮಿತಿಯನ್ನು ದಾಟಿಲ್ಲ ಮತ್ತು ಹೀಗಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಗುಣಮಟ್ಟದ’ ಶಿಕ್ಷಣವನ್ನು ನೀಡಲು ಸಾಧ್ಯವಾಗು ವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಆದ್ದರಿಂದ ಅವರು 1 ರಿಂದ 5 ನೇ ತರಗತಿಗೆ ಭೋದನೆ ಮಾಡಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.