ಬೆಂಗಳೂರುಸುವರ್ಣ ಗಿರಿ ಟೈಮ್ಸ್
ಇಂದು ಏಕಕಾಲದಲ್ಲಿ 14 ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ.
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಸಮರ ಮುಂದುವರೆಸಿದ್ದಾರೆ. ಬೆಂಗಳೂರು, ತುಮಕುರು ಸೇರಿದಂತೆ ರಾಜ್ಯದ 14 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಸರ್ವೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೆ.ಆರ್.ಪುರ ತಾಲೂಕು ಕಚೇರಿಯ ಸರ್ವೆ ಸೂಪರ್ ವೈಸರ್ ಕೆ.ಟಿ.ಶ್ರೀನಿವಾಸ ಮೂರ್ತಿ ಮನೆ, ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಒಟ್ಟು 14 ಕಡೆ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.