ಮಹಾರಾಷ್ಟ್ರ: ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ಹೋರಾಟ: ಕರ್ನಾಟಕದ 2 ಬಸ್ ಸೇರಿ 6 ಬಸ್ಗಳಿಗೆ ಬೆಂಕಿ.
ಮಹಾರಾಷ್ಟ್ರ: ಜಾಲನಾ ಜಿಲ್ಲೆಯ ಶಹಗಡ್ ನಲ್ಲಿ ಮಹಾರಾಷ್ಟ್ರದಲ್ಲಿ ಮರಾಠಿಗರಿಗೆ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ವೇಳೆಯಲ್ಲಿ, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಮಹಾರಾಷ್ಟ್ರ ಮೀಸಲಾತಿ ಕಿಚ್ಚಿಗೆ, ಕೆ ಎಸ್ ಆರ್ ಟಿ ಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲೇ, ಬೆಂಕಿ ಹಚ್ಚಲಾಗಿದೆ.
ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ಶಹಗಡ್ ನಲ್ಲಿ ಕಳೆದ ನಾಲ್ಕು ದಿನಗಳ ಮರಾಠಿಗರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸೋ ಸಂಬಂಧ ಪ್ರತಿಭಟನೆ ನಡೆಸಲಾಗುತ್ತಿತ್ತು.
ಪ್ರತಿಭಟನಾ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಂತೆ, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾ ಕಾರರ ಮೇಲೆ ಲಾಠಿ ಚಾರ್ಜ್ ಕೂಡ ನಡೆಸಿದ್ದಾರೆ.
ಇದರಿಂದಾಗಿ ಉದ್ರಿಕ್ತಗೊಂಡ ಪ್ರತಿಭಟನಾ ಕಾರರರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಸೇರಿದಂತೆ ಮಹಾರಾಷ್ಟ್ರ ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ಔರಂಗಾಬಾದ್ ಹಾಗೂ ಹುಬ್ಬಳ್ಳಿ ಮಾರ್ಗದ ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗುತ್ತಿದೆ.
ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ 45 ಪ್ರಯಾಣಿಕರಿದ್ದರು. ಬಸ್ ಗೆ ಬೆಂಕಿ ಹಚ್ಚುತ್ತಿದ್ದಂತೆ, ಪ್ರಯಾಣಿಕರನ್ನು ಕೆಳಗೆ ಇಳಿಸಿದ ಪರಿಣಾಮ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೀಗ ಮಹಾರಾಷ್ಟ್ರ ಪೊಲೀಸರ ಜೊತೆಗೆ ಸಾರಿಗೆ ಇಲಾಖೆಯ ಅಧಿಕಾರಿಗಳು ಸಂಪರ್ಕದಲ್ಲಿ ಇದ್ದಾರೆ ಎಂಬುದಾಗಿ ತಿಳಿದು ಬಂದಿದೆ.