ಧಾರವಾಡಸುವರ್ಣ ಗಿರಿ ಟೈಮ್ಸ್

ಕಾಂಗ್ರೆಸ್ ಗೆ ಮಾನಸಿಕ ರೋಗ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯ.

ಹುಬ್ಬಳ್ಳಿ: ಇಡೀ ಜಗತ್ತೇ ಭಾರತವನ್ನು ಹೊಗಳುತ್ತಿದ್ದರೆ, ಕಾಂಗ್ರೆಸ್ ಪಕ್ಷವು ‘ಜಿ–20’ ಶೃಂಗಸಭೆ ನಡೆಯುತ್ತಿದ್ದ ಪ್ರದೇಶದಲ್ಲಿ ನಿಂತ ಮಳೆ ನೀರಿನ ಫೋಟೊ ಟ್ವಿಟ್ ಮಾಡಿ‌ ಮಾನಸಿಕ ರೋಗಿಯಂತೆ ವರ್ತಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯ ಮಾಡಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಜೋರಾಗಿ ಮಳೆ ಬಂದ ಕಾರಣ ರಸ್ತೆಯಲ್ಲಿ ಸಹಜವಾಗಿ ನೀರು ನಿಂತು, ಹರಿದು ಹೋಗಿದೆ. ಆದರೆ, ರಾಹುಲ್ ಗಾಂಧಿ ಮತ್ತು ಜೈರಾಮ್ ರಮೇಶ ಅವರು ಅದನ್ನೇ ಟ್ವಿಟ್ ಮಾಡಿ ಬೌದ್ಧಿಕ ದಾರಿದ್ರ್ಯ ಪ್ರದರ್ಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸುವ ಭರದಲ್ಲಿ, ದೇಶವನ್ನೇ ವಿರೋಧಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾರತದ 75 ವರ್ಷದ ಇತಿಹಾಸದಲ್ಲಿ ಜಿ-20 ದೊಡ್ಡ ಮೈಲಿಗಲ್ಲು. ಇಲ್ಲಿ ಭಾಗವಹಿಸಿದ ರಾಷ್ಟ್ರಗಳು ಭಿನ್ನಾಭಿಪ್ರಾಯ ವ್ಯಕ್ತಪಡಿಸದೆ ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದು ದೊಡ್ಡ ಸಾಧನೆ. ಭಾರತದ ನೇತೃತ್ವವನ್ನು ಜಗತ್ತು ಒಪ್ಪಿಕೊಳ್ಳುತ್ತಿದೆ ಎನ್ನುವುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದರು.

ಶಕ್ತಿ ಯೋಜನೆಯಿಂದ ಖಾಸಗಿ ಬಸ್‌ ಮಾಲೀಕರಿಗೆ, ಚಾಲಕರಿಗೆ ಸಮಸ್ಯೆಯಾಗಿದ್ದು, ಸರ್ಕಾರ ಅವರ ಬಗ್ಗೆಯೂ ಗಮನಹರಿಸಬೇಕು. ‘ಉಚಿತ ಸೇವೆ’ ಎಂದು ಸರ್ಕಾರ ಮನಬಂದಂತೆ ನಡೆದುಕೊಳ್ಳುತ್ತಿದೆ. ಎಲ್ಲ ವರ್ಗದವರನ್ನೂ ಗಣನೆಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button