Notice: Function _load_textdomain_just_in_time was called incorrectly. Translation loading for the loginizer domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home2/suvarnagiritimes/public_html/wp-includes/functions.php on line 6114
ಕುಡಚಿ ಪಟ್ಟಣದಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರು ಯುವತಿಯರ ರಕ್ಷಣೆ. - suvarna giri times
ಬೆಳಗಾವಿಸುವರ್ಣ ಗಿರಿ ಟೈಮ್ಸ್

ಕುಡಚಿ ಪಟ್ಟಣದಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರು ಯುವತಿಯರ ರಕ್ಷಣೆ.

ರಾಯಬಾಗ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿರುವ ಶಿವಶಕ್ತಿ ಲಾಡ್ಜ್ ವೊಂದರಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಯುವತಿಯರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕುಡಚಿ ಪಟ್ಟಣದ ಶಿವಶಕ್ತಿ ಲಾಡ್ಜ್​ದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಸಿಇಎನ್ ಇನ್ಸ್‌ಪೆಕ್ಟರ್ ಬಿ ಆರ್ ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆಸಿ ಗುಜರಾತ್, ಪಶ್ಚಿಮ ಬಂಗಾಳ ಮೂಲದ ತಲಾ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.

ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳಾದ ಶಿವಶಕ್ತಿ ಲಾಡ್ಜ್ ಮ್ಯಾನೇಜರ್ ಮೈಸೂರು ಜಿಲ್ಲೆ ನಂಜನಗೂಡು ಮೂಲದ ರಮೇಶ್ ರಾವಳಿ, ಶಂಕರ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

ಆರೋಪಿಗಳು ಲಾಡ್ಜ್ ಬಾಡಿಗೆ ಪಡೆದು ಅಂತಾರಾಜ್ಯ ಯುವತಿಯರನ್ನು ಕರೆತಂದು ಮೊಬೈಲ್​​​ನಲ್ಲಿ ಯುವತಿಯರ ಭಾವಚಿತ್ರ ತೋರಿಸಿ ದಂಧೆ ನಡೆಸುತ್ತಿದ್ದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಕುಡಚಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button