ದೆಹಲಿಸುವರ್ಣ ಗಿರಿ ಟೈಮ್ಸ್
ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ: ಹೆಚ್.ಡಿ. ಕುಮಾರಸ್ವಾಮಿ.

ದೆಹಲಿ: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ, ಮುಂದೆ ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಮೈತ್ರಿಯಾಗಲಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ದೆಹಲಿಯ ಕೃಷ್ಣ ಮೆನನ್ ಮಾರ್ಗ್ನಲ್ಲಿರುವ ಅಮಿತ್ ಶಾ ನಿವಾಸದಲ್ಲಿ ಮೈತ್ರಿ ವಿಷಯವಾಗಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಪಕ್ಷಗಳು ಗೆಲ್ಲುವುದೇ ನಮ್ಮ ಗುರಿ ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೋವಾ ಸಿಎಂ ಪ್ರಮೋದ್ ಸಾವಂತ್, ಕುಪೇಂದ್ರ ರೆಡ್ಡಿ, ನಿಖಿಲ್ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಹಾಜರಿದ್ದರು.