ಬೆಂಗಳೂರು ಗ್ರಾಮಾಂತರಸುವರ್ಣ ಗಿರಿ ಟೈಮ್ಸ್

ಅಕ್ರಮವಾಗಿ ಗೋಮಾಂಸ ಸಾಗಾಟ: ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ಕಾರಿಗೆ ಬೆಂಕಿ.

ದೊಡ್ಡಬಳ್ಳಾಪುರ: ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರ ವೃತ್ತದಲ್ಲಿ ತಡೆದು ಒಂದು ಕಾರಿಗೆ ಬೆಂಕಿ ಹಚ್ಚಿರುವ ಪ್ರಕರಣ ಭಾನುವಾರ ಬೆಳಿಗ್ಗೆ 5.30 ರ ಸುಮಾರಿಗೆ ನಡೆದಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಹೆಚ್ಚಿನ ಅನಾಹುತ ನಡೆಯದಂತೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಗೋಮಾಂಸ ಸಾಗಿಸುತ್ತಿದ್ದ ವಾಹನ ಚಾಲಕರ ತಲೆಯ ಗೋಮಾಂಸವನ್ನು ಇಟ್ಟು ಪ್ರವಾಸಿ ಮಂದಿರ ವೃತ್ತದಲ್ಲಿ ಮೆರವಣಿಗೆ ಮಾಡಲಾಗಿರುವ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ಘಟನೆಯಿಂದ ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪುಗೂಡಿದ್ದ ಜನರನ್ನು ಚದುರಿಸಿದ್ದಾರೆ. ಘಟನ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಗೋ ಮಾಂಸ ಸಾಗಾಣಿಕೆ ಮಾಡುತ್ತಿದ್ದ ಐದು ವಾಹನ ಹಾಗೂ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದು ಎರಡೂ ಕಡೆಯ ಆರೋಪಿಗಳ ವಿರಚಾರ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button