ಬೆಂಗಳೂರುಸುವರ್ಣ ಗಿರಿ ಟೈಮ್ಸ್
ಬೆಂಗಳೂರು ಬಂದ್ ಭದ್ರತೆಯಲ್ಲಿರುವ ಪೊಲೀಸರಿಗೆ ಇಲಿ ಸತ್ತು ಬಿದ್ದಿರುವ ಆಹಾರ ಪೂರೈಕೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ಹರಿಸುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ನಡೆಯುತ್ತಿರುವ ಬೆಂಗಳೂರು ಬಂದ್ ಪ್ರತಿಭಟನೆಯ ಭದ್ರತೆಗೆ ನಿಯೋಜನೆ ಮಾಡಿದ ಪೊಲೀಸರಿಗೆ ಹೋಟೆಲ್ನಿಂದ ಸರಬರಾಜು ಮಾಡಿದ ಊಟದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳವಾರ ಬೆಳಗ್ಗೆ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸರಿಗೆ ಸರಬರಾಜು ಮಾಡಿದ ಬೆಳಗ್ಗಿನ ತಿಂಡಿ ಪ್ಯಾಕೆಟ್ ತೆರೆಯುತ್ತಿದ್ದಂತೆ ಸತ್ತಿರುವ ಇಲಿ ಕಂಡಿದೆ. ಅದನ್ನು ಕಂಡು ಸಿಬ್ಬಂದಿ ಶಾಕ್ ಆಗಿದ್ದಾರೆ.
ತಿನ್ನುವ ಆಹಾರವನ್ನು ಇಷ್ಟು ಕಳಪೆಯಾಗಿ ನೀಡಿರುವ ಬಗ್ಗೆ ಪೊಲೀಸ್ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಯುಕ್ತರು ಇದನ್ನೇ ತಿನ್ನುತ್ತಿರಾ. ನಮ್ಮ ಜೀವಕ್ಕೆ ಬೆಲೆ ಇಲ್ವ ಎಂದು ಕಿಡಿಕಾರಿದ್ದಾರೆ.