ರಾಮನಗರಸುವರ್ಣ ಗಿರಿ ಟೈಮ್ಸ್

ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ: ಒಂದೇ ಕುಟುಂಬ ಮೂವರು ಸಾವು.

ರಾಮನಗರ: ಹಿಂದಿಕ್ಕುವ ಭರದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಒಮ್ನಿ ಕಾರು ಡಿಕ್ಕಿ ಹೊಡೆದಿದ್ದರಿಂದ, ಪತಿ–ಪತ್ನಿ ಸೇರಿದಂತೆ ಒಂದೇ ಕುಟುಂಬದವರು ಮೂವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಹೊರವಲಯದ ಕೆಂಪೇಗೌಡನದದೊಡ್ಡಿ ಬಳಿಯ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಬೆಂಗಳೂರಿನ ಪೀಣ್ಯ 2ನೇ ಹಂತದ ನಿವಾಸಿಗಳಾದ ರಾಜೇಶ್ (50), ಅವರ ಪತ್ನಿ ಸುಮಾ (45) ಹಾಗೂ ಅತ್ತೆ ಲಕ್ಕಮ್ಮ (65) ಮೃತರು. ಗಾಯಗೊಂಡಿರುವ ದಂಪತಿ ಪುತ್ರರಾದ ಮೋಹನ್, ರೋಹನ್, ಸಹೋದರ ಸುರೇಶ್ ಹಾಗೂ ಅವರ ಪುತ್ರ ಸೃಜನ್‌ಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪಿತೃಪಕ್ಷ ಪೂಜೆ ಮಾಡಿಸುವುದಕ್ಕಾಗಿ ಕುಟುಂಬದ ಏಳು ಮಂದಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಹೋಗುತ್ತಿದ್ದರು. ಕಾರು ಚಾಲನೆ ಮಾಡುತ್ತಿದ್ದ ರಾಜೇಶ್ ಅವರು, ಕೆಂಪೇಗೌಡನದೊಡ್ಡಿ ಬಳಿ ಮುಂದೆ ಹೋಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.

ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ರಾಜೇಶ್ ಮತ್ತು ಸುಮಾ ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡಿದ್ದ ಲಕ್ಕಮ್ಮ ಅವರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದರು. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಯಿತು. ಸಾರ್ವಜನಿಕರ ನೆರವಿನಿಂದ ಜಖಂಗೊಂಡಿದ್ದ ಕಾರನ್ನು ರಸ್ತೆ ಪಕ್ಕಕ್ಕೆ ಸರಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button