ಚಾಕು ಇರಿದು ಸರ್ಕಾರಿ ಮಹಿಳಾ ಅಧಿಕಾರಿಯನ್ನು ಬರ್ಬರ ಹತ್ಯೆ.!

ಬೆಂಗಳೂರು: ಚಾಕು ಇರಿದು ಸರ್ಕಾರಿ ಮಹಿಳಾ ಅಧಿಕಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ. ಪ್ರತಿಮಾ ಮೃತ ಅಧಿಕಾರಿ ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ. ತೀರ್ಥಹಳ್ಳಿ ಮೂಲದ ಪ್ರತಿಮಾ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ತಡರಾತ್ರಿ ಮನೆಗೆ ನುಗ್ಗಿ ದುಷ್ಕರ್ಮಿಗಳು ಪ್ರತಿಮಾಳನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,ಪ್ರತಿಮಾ ಪತಿಯಿಂದ ದೂರವಾಗಿ ಮಹಿಳೆ ಒಬ್ಬಂಟಿಯಾಗಿ ಬದುಕುತ್ತಿದ್ದರು. ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ರಾತ್ರಿ 8 ಗಂಟೆಗೆ ಕಛೇರಿಯಿಂದ ಮನೆಗೆ ಚಾಲಕ ಡ್ರಾಪ್ ಮಾಡಿ ತೆರಳಿದ ಬಳಿಕ ಹಂತಕರು ಬಂದು ಕೊಲೆ ಮಾಡಿ ಹೋಗಿದ್ದಾರೆ
ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಶನಿವಾರ ರಾತ್ರಿ ಪ್ರತಿಮಾ ಅವರನ್ನು ಚಾಕುನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ಪ್ರತಿಮಾ ಅವರ ಸಹೋದರ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆ ಬಳಿ ತೆರಳಿದಾಗ ಕೊಲೆಯಾದ ವಿಚಾರ ಬೆಳಕಿಗೆ ಬಂದಿದೆ.
ಮನೆಯ ಒಳಗೆ ಬಂದು ಕೊಲೆ ಮಾಡಿ ಹೋಗಿರುವ ಕಾರಣ ಮೇಲ್ನೋಟಕ್ಕೆ ಇದು ಪಕ್ಕಾ ಪ್ಲಾನ್ ಮಾಡಿ, ಪರಿಚಿತರೇ ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.