ಬೆಂಗಳೂರುಸುವರ್ಣ ಗಿರಿ ಟೈಮ್ಸ್

ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ಸಾವು.

ಬೆಂಗಳೂರು: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ನೆಲಗದರನಹಳ್ಳಿಯ ಕಾರ್ಖಾನೆಯೊಂದರಲ್ಲಿ ನಡೆದಿದೆ.

ಶ್ವೇತಾ(33) ಮೃತ ದುರ್ದೈವಿ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಮಹಿಳ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆ ಕೆಲಸ ಮಾಡುತ್ತಿದ್ದರು.

ನಡೆದಿದ್ದೇನು?: ಬಣ್ಣ ಗಟ್ಟಿಯಾಗುತ್ತಿದ್ದರಿಂದ ಪರಿಶೀಲಿಸಲು ಮಿಕ್ಸರ್ ಬಳಿ ಬಂದು ಬಗ್ಗಿದ್ದಾರೆ. ಬಣ್ಣ ಬೆರೆಸುವ ಗ್ರೈಂಡರ್​ನಲ್ಲಿ ಜಡೆ ಸಿಲುಕಿದ ಪರಿಣಾಮ ಶ್ವೇತಾ ತಲೆ ಕತ್ತರಿಸಿ ಹೋಗಿದೆ.

ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಮಿಕ್ಸರ್ ಶಬ್ದದಿಂದಾಗಿ ಯಾರಿಗೂ ಕೇಳಿಸಿಲ್ಲ. ಬಳಿಕ ಉಳಿದ ಕೆಲಸಗಾರರು ಮಿಕ್ಸರ್ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button