ಮಂಡ್ಯಸುವರ್ಣ ಗಿರಿ ಟೈಮ್ಸ್
ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಪ್ರವಾಸಿಗರು ಸಾವು.!

ಮಂಡ್ಯ: ಶ್ರೀರಂಗಪಟ್ಟಣದ ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ಮೃತ ಪಟ್ಟವರು ಹರೀಶ್, ನಂಜುಂಡ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ. ಮೈಸೂರಿನ ಕಾರುಣ್ಯ ಟ್ರಸ್ಟ್ ನ 25 ಸಿಬ್ಬಂದಿ ರಜೆ ಹಿನ್ನಲೆ ಮೋಜು-ಮಸ್ತಿಗಾಗಿ ಇಲ್ಲಿಗೆ ಬಂದಿದ್ದರು. ಈ ವೇಳೆ ಕೆಆರ್ಎಸ್ ಹಿನ್ನೀರಿನಲ್ಲಿ ಆಟವಾಡುವಾಗ ಮುಳುಗಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಇಬ್ಬರು ಮೃತದೇಹ ಹೊರಗೆ ತೆಗೆದಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.