ರಾಮನಗರಸುವರ್ಣ ಗಿರಿ ಟೈಮ್ಸ್
ಮಿನಿ ಬಸ್, ಕಾರು ಡಿಕ್ಕಿ ಹೊಡೆದು ಸಾವು !!
ರಾಮನಗರ: ಮಿನಿ ಬಸ್‌ಗೆ ಕಾರು ಡಿಕ್ಕಿಯಾಗಿ ಪ್ರೇಮಿಗಳು ಸಾವನ್ನಪ್ಪಿರುವ ಘಟನೆ ರಾಮನಗರದ ಕನಕಪುರ ತಾಲೂಕಿನ ಕೆಬ್ಬಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಕೆಬ್ಬಹಳ್ಳಿ ಗ್ರಾಮದ ದೀಪಕ್ (25) ಮತ್ತು ಶೈಲಾ (22) ಎಂದು ಗುರುತಿಸಲಾಗಿದೆ. ಕನಕಪುರದಿಂದ ದೀಪಕ್ ಸ್ವಗ್ರಾಮ ಕೆಬ್ಬಹಳ್ಳಿಗೆ ಅತಿವೇಗವಾಗಿ ಕಾರು ಚಲಾಯಿಸುತ್ತಿದ್ದ. ದೀಪಕ್ ಮುಂದಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಮಿನಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿದ್ದ ಶೈಲಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರವಾಗಿ ಗಾಯಗೊಂಡಿದ್ದ ದೀಪಕ್‌ನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ದೀಪಕ್ ಕೂಡಾ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.