ಬೆಳಗಾವಿಸುವರ್ಣ ಗಿರಿ ಟೈಮ್ಸ್

ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ !!

ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಯುವಕನೊಬ್ಬ ಪ್ರೀತಿಸಿದ ಯುವತಿ ಜತೆಗೆ ಮನೆ ಬಿಟ್ಟು ಓಡಿ ಹೋಗಿದ್ದ. ಇದರಿಂದ ಆಕ್ರೋಶಗೊಂಡು ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿದ ದುರುಳರು ದುರ್ವರ್ತನೆ ತೋರಿದ್ದಾರೆ.

ಕಮಲವ್ವ ಹಲ್ಲೆಗೊಳಗಾದವರು. ದುಂಡಪ್ಪ ಅಶೋಕ ನಾಯಕ್ ಎಂಬಾತ ಪ್ರಿಯಾಂಕಾ ಬಸಪ್ಪ ನಾಯಕ್ ಎಂಬಾಕೆಯನ್ನು ಪ್ರೀತಿಸಿದ್ದ. ಆದರೆ ಇದಕ್ಕೆ ಪ್ರಿಯಾಂಕಾ ಕುಟುಂಬಸ್ಥರ ವಿರೋಧ ಇತ್ತು. ಪ್ರಿಯಾಂಕಾ ಕುಟುಂಬಸ್ಥರು ಇಂದು ಸೋಮವಾರ ಯಾದಿ ಮೇ ಶಾದಿ ಮಾಡಲು ನಿರ್ಧರಿಸಿದ್ದರು. ಈ ವಿಚಾರ ತಿಳಿದು ಮಧ್ಯರಾತ್ರಿಯೇ ದುಂಡಪ್ಪ ಪ್ರಿಯಾಂಕಾಳನ್ನು ಕರೆದುಕೊಂಡು ಮನೆ ಬಿಟ್ಟು ಹೋಗಿದ್ದ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಿಯಾಂಕಾರ ಕುಟುಂಬಸ್ಥರೊಳಗೆ ಇದ್ದ ರಾಕ್ಷಸತ್ವ ಹೊರಬಂದಿತ್ತು. ದುಂಡಪ್ಪ ತಮ್ಮ ಮಗಳನ್ನು ರಾತ್ರೋರಾತ್ರಿ ಕರೆದುಕೊಂಡು ಹೋಗಿದ್ದಾನೆ ಎಂದು ಆಕ್ರೋಶಗೊಂಡಿದ್ದರು. ಹೀಗಾಗಿ ಯುವತಿ ಮನೆಯವರು ಮಧ್ಯರಾತ್ರಿ ದುಂಡಪ್ಪನ ಮನೆಗೆ ನುಗ್ಗಿ, ಕಲ್ಲು ತೂರಾಟ ಮಾಡಿದ್ದಾರೆ. ಇಡೀ ಮನೆಯನ್ನೇ ಧ್ವಂಸ ಮಾಡಿ ಕ್ರೂರವಾಗಿ ವರ್ತಿಸಿದ್ದಾರೆ.

ಇತ್ತ ಮನೆಯೊಳಗೆ ಮಲಗಿದ್ದ ದುಂಡಪ್ಪನ ತಾಯಿ ಕಮಲವ್ವಳನ್ನು ಹೊರಗೆ ಎಳೆದುಕೊಂಡು ಬಂದು ಹೊಡೆದಿದ್ದಾರೆ. ಅಷ್ಟೆಕ್ಕೆ ಸುಮ್ಮನಾಗದೇ ಆಕೆಯ ಬಟ್ಟೆ ಬಿಚ್ಚಿಸಿ, ಮೆರವಣಿಗೆ ನಡೆಸಿದ್ದಾರೆ. ಬಳಿಕ ಕಂಬಕ್ಕೆ ಕಟ್ಟಿ ಹಾಕಿ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಮಹಿಳೆಯರು ಸೇರಿ ಒಂಬತ್ತು ಮಂದಿ ಕಮಲ್ವಳ ಮೇಲೆ ಹಲ್ಲೆ ನಡೆಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Leave a Reply

Your email address will not be published. Required fields are marked *

Back to top button