ಬೆಂಗಳೂರು ಗ್ರಾಮಾಂತರಸುವರ್ಣ ಗಿರಿ ಟೈಮ್ಸ್

ಕೆಂಪೇಗೌಡ ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ: 9 ಕಾರುಗಳು ಜಖಂ

ದೇವನಹಳ್ಳಿ : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ 9 ಕಾರುಗಳು ಮಧ್ಯೆ ಸರಣಿ ಅಪಘಾತ ಸಂಭವಿಸಿದೆ.

ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿ 7ರ ಸಾದಹಳ್ಳಿ ಗೇಟ್‌ ಬಳಿ ಈ ಅವಘಡ ಸಂಭವಿದ್ದು ಕಿ.ಮೀಟರ್‌ಗಟ್ಟಲೆ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ವಾಹನ ಸವಾರರು ಅರ್ಧಗಂಟೆಗೂ ಅಧಿಕ ಸಮಯ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.ಸದ್ಯ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚಿಕ್ಕಜಾಲ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button