ಮಂಡ್ಯಸುವರ್ಣ ಗಿರಿ ಟೈಮ್ಸ್
ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿ ರಾಣಿ ಲೋಕಾಯುಕ್ತ ಬಲೆಗೆ !!
ಮಂಡ್ಯ: ಪೌತಿ ಖಾತೆ ಬದಲಾವಣೆಗೆ ₹1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿ ರಾಣಿ ಹಾಗೂ ಕಂದಾಯ ಅಧಿಕಾರಿ ಗಿರೀಶ್ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದರು.
ಮಂಡ್ಯ ನಿವಾಸಿ ಪ್ರಶಾಂತ್ ಎಂಬುವರು ಪುರಸಭೆ ವ್ಯಾಪ್ತಿಯಲ್ಲಿನ ಆಸ್ತಿಯೊಂದರ ಪೌತಿ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಆರೋಪಿಗಳು ₹ 2 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಪ್ರಶಾಂತ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಅಧಿಕಾರಿಗಳ ಸೂಚನೆಯಂತೆ ಶನಿವಾರ ಕಚೇರಿಯಲ್ಲಿ ಲಂಚ ನೀಡುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ನಗದು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದರು. ಮಂಡ್ಯ ಲೋಕಾಯುಕ್ತ ಡಿವೈಎಸ್ಪಿ ಎಚ್.ಟಿ. ಸುನಿಲ್‌ಕುಮಾರ್ ಹಾಗೂ ಇನ್‌ಸ್ಪೆಕ್ಟರ್ ಮೋಹನ್ ರೆಡ್ಡಿ ನೇತೃತ್ವದ ತಂಡವು ಈ ದಾಳಿ ನಡೆಸಿತು.