ಪತ್ನಿಯನ್ನೇ ತೊರೆದ ಮೋದಿ, ರಾಮ ಮಂದಿರ ಉದ್ಘಾಟನೆ ಪೂಜೆ ನೆರವೇರುಸುತ್ತಾರಾ ? ಸುಭ್ರಹ್ಮಣ್ಯ ಸ್ವಾಮಿ.
ನವದೆಹಲಿ: ‘ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿ, ಕಷ್ಟಗಳನ್ನು ಎದುರಿಸಿದ ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ. ಆದರೆ ಪತ್ನಿಯನ್ನೇ ತೊರೆದ ಪ್ರಧಾನಿ ನರೇಂದ್ರ ಮೋದಿ ಅವರು ಇದರ ಉದ್ಘಾಟನಾ ಪೂಜೆ ಹೇಗೆ ನೆರವೇರಿಸುತ್ತಾರೆ’ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.
ಅಯೋಧ್ಯೆಯಲ್ಲಿ ಜ. 22ರಂದು ನೆರವೇರಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ‘ಎಕ್ಸ್’ ವೇದಿಕೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ರಾಮಭಕ್ತರು ಅಯೋಧ್ಯೆಯಲ್ಲಿ ರಾಮ ಲಾಲಾ ಮೂರ್ತಿಯ ಪ್ರಾಣ ಪ್ರತಿಷ್ಠಾ ಪೂಜೆಯ ನೆರವೇರಿಕೆಯಲ್ಲಿ ಪಾಲ್ಗೊಳ್ಳಲು ಮೋದಿಗೆ ಅವಕಾಶ ನೀಡುವುದು ಹೇಗೆ? ಮೋದಿ ಬದಲಿಗೆ ತನ್ನ ಹೆಂಡತಿಯನ್ನು ತ್ಯಜಿಸಲು ಹೆಸರುವಾಸಿಯಾಗಿದ್ದಾರೆ, ಆದರೂ ಅವರು ಪೂಜೆ ಮಾಡುತ್ತಾರೆಯೇ?
— ಸುಬ್ರಮಣಿಯನ್ ಸ್ವಾಮಿ (@Swamy39) ಡಿಸೆಂಬರ್ 27, 2023
ರಾಮ ಸುಮಾರು ಒಂದೂವರೆ ದಶಕದಷ್ಟು ಕಾಲ ವನವಾಸವನ್ನು ಅನುಭವಿಸಿದ. ಅಪಹರಣಗೊಂಡ ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿದ. ಆದರೆ ಮೋದಿ ಅವರು ತಮ್ಮ ಪತ್ನಿಯನ್ನು ತ್ಯಜಿಸಿದವರು ಎಂಬುದು ಎಲ್ಲರಿಗೂ ತಿಳಿದ ವಿಷಯ. ಹಾಗಿದ್ದರೆ ಅವರು ಹೇಗೆ ಈ ಪೂಜೆ ನೆರವೇರಿಸುತ್ತಾರೆ? ಎಂದಿದ್ದಾರೆ.
‘ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯವನ್ನು ಮೋದಿ ಅವರು ನೆರವೇರಿಸಲು ರಾಮನ ಭಕ್ತರು ಹೇಗೆ ಅವಕಾಶ ನೀಡುತ್ತಾರೆ’ ಎಂದೂ ಸುಬ್ರಮಣಿಯನ್ ಸ್ವಾಮಿ ಕೇಳಿದ್ದಾರೆ.