ಹಾನಗಲ್ ಅತ್ಯಾಚಾರ ಪ್ರಕರಣ: ಇನ್ಸ್ಪೆಕ್ಟರ್ ಶ್ರೀಧರ್, ಕಾನ್ಸ್ಟೆಬಲ್ ಅಮಾನತು !
ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ವಿಳಂಬ ಧೋರಣೆ ತೋರಿದ ಆರೋಪದ ಮೇರೆಗೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಹಾನಗಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀಧರ್ ಎಸ್.ಆರ್. ಮತ್ತು ಕಾನ್ಸ್ಟೆಬಲ್ ಇಲಿಯಾಜ್ ಶೇಠ್-ಸನದಿ ಅವರನ್ನು ಎಸ್ಪಿ ಅಂಶುಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಲಾಡ್ಜ್ನಲ್ಲಿದ್ದ ಹಿಂದೂ ಪುರುಷ ಮತ್ತು ಮುಸ್ಲಿಂ ಮಹಿಳೆ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿತ್ತು. ಬಳಿಕ ಹೊರಗಡೆ ಎಳೆದೊಯ್ದ ಹಲ್ಲೆ ನಡೆಸಿದ್ದರು. ಆ ನಂತರ ಸಾಮೂಹಿಕ ಅತ್ಯಾಚಾರ ಎಸಗಿದ್ದರು.
ಇನ್ನೂ ರೂಂ ಬಾಯ್ ನೀಡಿದ ದೂರಿನ ಮೇರೆಗೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಅನೈತಿಕ ಪೊಲೀಸ್ಗಿರಿ ಪ್ರಕರಣ ಮಾತ್ರ ದಾಖಲಾಗಿತ್ತು. ಆಬಳಿಕ ಸಂತ್ರಸ್ತೆಯು, 7 ಜನರಿಂದ ಸಾಮೂಹಿಕ ಅತ್ಯಾಚಾರವಾಗಿದೆ ಎಂದು ತಿಳಿಸಿದ್ದರು. ಆನಂತರ ಎಫ್ಐಆರ್ನಲ್ಲಿ ‘376-ಡಿ’ ಸೆಕ್ಷನ್ ಅನ್ನು ಪೊಲೀಸರು ಸೇರಿಸಿದ್ದರು.
ಈ ಪ್ರಕರಣದಲ್ಲಿ ಮಾಹಿತಿ ಸಂಗ್ರಹಿಸುವಲ್ಲಿ ವೈಫಲ್ಯ, ಎಫ್ಐಆರ್ ದಾಖಲಿಸುವಲ್ಲಿ ನಿರ್ಲಕ್ಷ್ಯ ಮತ್ತು ಆರೋಪಿಗಳನ್ನು ಶೀಘ್ರ ಬಂಧಿಸುವಲ್ಲಿ ವಿಳಂಬ ಧೋರಣೆ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ.