ಬೆಳಗಾವಿಸುವರ್ಣ ಗಿರಿ ಟೈಮ್ಸ್
ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿ ಮೂವರು ಮಹಿಳೆಯರ ದುರ್ಮರಣ.

ಕಾಗವಾಡ: ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಉಗಾರ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವಾಗ ಕಾಗವಾಡ ಮಾರ್ಗವಾಗಿ ಬರುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಪಕ್ಕದಲ್ಲೇ ನಡೆದುಕೊಂಡು ಬರುತ್ತಿದ್ದ ಶೇಡಬಾಳ ಮೂಲದ ಕೂಲಿ ಕಾರ್ಮಿಕ ಮಹಿಳೆಯರು ಬಲಿಯಾಗಿದ್ದಾರೆ.
ಶೇಡಬಾಳ ಗ್ರಾಮದ ಹೊರವಲಯದ ಇಂದಿರಾ ನಗರದಲ್ಲಿ ಸಮೀಪ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಕಾಗವಾಡ ಶಾಸಕ ರಾಜು ಕಾಗೆ ದೌಡಾಯಿಸಿದ್ದಾರೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.