ಕಲಬುರಗಿಸುವರ್ಣ ಗಿರಿ ಟೈಮ್ಸ್
ಹಾಸ್ಟೆಲ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ !

ಕಲಬುರಗಿ: ಬಾಲಕಿಯರ ಹಾಸ್ಟಲ್ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಓರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾ. ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ.
ಚಿತ್ತಾಪುರ ತಾ. ಗ್ರಾಮವೊಂದರ ಎಸ್ಎಸ್ಎಲ್ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಘಟನೆ ಸಂಬಂಧ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುವುದು ತನಿಖೆ ನಂತರ ತಿಳಿದು ಬರಲಿದೆ.