ಹಾಸ್ಟಲ್‌ನಿಂದ ಟೀ ಕುಡಿಯಲು ಎಂದು ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ರಾಮನಗರ: ಹಾಸ್ಟಲ್‌ನಿಂದ ಕರೆದೊಯ್ದು 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 36 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಲಾಗಿರುವ ಘಟನೆ ನಡೆದಿದೆ. ಅಣ್ಣ ಎಂದು ಪರಿಚಯಿಸಿಕೊಂಡು ಟೀ ಕುಡಿಸಿಕೊಂಡು ಬರ್ತೇನೆ ಅಂತ ಅಪ್ರಾಪ್ತೆಯನ್ನು ಹಾಸ್ಟೆಲ್ನಿಂದ ಕರೆದುಕೊಂಡು ಹೋಗಿ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ.
ಇನ್ನು ಅಪರಿಚಿತ ವ್ಯಕ್ತಿ ಬಾಲಕಿಯನ್ನು ಕರೆದುಕೊಂಡು ಹೋಗಿ ಎರಡು ತಾಸು ಕಳೆದರೂ ಬಾರದ ಹಿನ್ನೆಲೆ ಹಾಸ್ಟಲ್ ಸಿಬ್ಬಂದಿ ಕುಟುಂಬಸ್ಥರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಲ್ಲದೆ ವ್ಯಕ್ತಿಯ ಹಾವಾಭಾವ ಕಂಡು ಸಿಬ್ಬಂದಿಗೆ ಅನುಮಾನ ಬಂದಿತ್ತು. ಸದ್ಯ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಆರೋಪಿ ಅಪ್ರಾಪ್ತಳನ್ನು ಮಾವಿನ ತೋಪಿಗೆ ಕರೆದೊಯ್ದಿದ್ದ. ಕೃತ್ಯ ಸ್ಥಳಕ್ಕೆ ತೆರಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯನ್ನು ಒಂದು ವರ್ಷದಿಂದ ಲೈಂಗಿಕವಾಗಿ ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ರಾಮನಗರ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.