ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್.3 ರಂದು ಚುನಾವಣೆ !

ಬೆಂಗಳೂರು: ವಿಧಾನ ಪರಿಷತ್ತಿಗೆ ಸದ್ಯದಲ್ಲೇ ಖಾಲಿ ಆಗುತ್ತಿರುವ ಆರು ಸ್ಥಾನಗಳಿಗೆ ಚುನಾವಣೆ ನಡೆಸಲು ಭಾರತ ಚುನಾವಣಾ ಆಯೋಗ ವೇಳಾ ಪಟ್ಟಿ ಬಿಡುಗಡೆ ಮಾಡಿದೆ.
ಮೂರು ಪದವೀಧರರ ಕ್ಷೇತ್ರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಜೂ.3 ರಂದು ಚುನಾವಣೆ ನಡೆಯಲಿದೆ. ಈಶಾನ್ಯ ಪದವೀಧರರ ಕ್ಷೇತ್ರ ಡಾ.ಚಂದ್ರಶೇಖರ ಬಿ.ಪಾಟೀಲ್, ನೈರುತ್ಯ ಪದವೀಧರರ ಕ್ಷೇತ್ರ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರರ ಕ್ಷೇತ್ರ ಎ. ದೇವೇಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರ ವೈ.ಎ.ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರ ಎಸ್.ಎಲ್.ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ಅವರ ಅಧಿಕಾರಾವಧಿ ಜೂ.21ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆ ಮಾಡಲಾಗಿದೆ.
ಅಧಿಸೂಚನೆ ಪ್ರಕಟಿಸುವ ದಿನ-ಮೇ 9 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ-ಮೇ 16, ನಾಮಪತ್ರ ಪರಿಶೀಲನೆ-ಮೇ 17 ನಾಮಪತ್ರ ಹಿಂಪಡೆಯಲು ಕೊನೆಯ ದಿನ-ಮೇ 20 ಮತದಾನ ದಿನ-ಜೂನ್.3, ಮತ ಎಣಿಕೆ- ಜೂನ್.6 ಮತದಾನದ ಸಮಯ: ಬೆಳಗ್ಗೆ 8 ರಿಂದ ಸಂಜೆ 4.