ಚಾಮರಾಜನಗರಸುವರ್ಣ ಗಿರಿ ಟೈಮ್ಸ್
ಕಾರು, ಬೈಕ್ ನಡುವೆ ಢಿಕ್ಕಿ: ಸವಾರ ಸಾವು

ಚಾಮರಾಜನಗರ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಜೊತೆಗೆ ಇಬ್ಬರು ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ವಡೆಕಹಳ್ಳ ಸಮೀಪ ವರದಿಯಾಗಿದೆ.
ಬೆಂಗಳೂರು ಜಿಲ್ಲೆಯ ಬನ್ನೆರುಘಟ್ಟ ಮೂಲದ ದುರ್ಗಾಪ್ರಸಾದ್ (24) ಮೃತರು ಎಂದು ತಿಳಿದು ಬಂದಿದೆ. ಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಮುಗಿಸಿಕೊಂಡು ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಬೈಕ್ ನಡುವೆ ಢಿಕ್ಕಿಯಾಗಿ ಈ ಅವಘಡ ಸಂಭವಹಿಸಿದೆ. ಸ್ಥಳದಲ್ಲಿ ಬೈಕ್ ಸವಾರ ಮೃತಪಟ್ಟರೆ, ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಸ್ಥಳದಲ್ಲಿದ್ದ ಸ್ಥಳೀಯರು ಗಂಭೀರ ಗಾಯಗೊಂಡ ವ್ಯಕ್ತಿಯ್ನ ಆಂಬುಲೆನ್ಸ್ ಮೂಲಕ ಸಮೀಪದ ಕೌದಳ್ಳಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.