ಧಾರವಾಡಸುವರ್ಣ ಗಿರಿ ಟೈಮ್ಸ್
ಕಾಮಗಾರಿಗಳನ್ನು ಮರು ಪರಿಶೀಲನೆ ಲೋಕಾಯುಕ್ತ ತನಿಖೆಗೆ ಒತ್ತಾಯ.

ಧಾರವಾಡ: ಕರ್ನಾಟಕ ಬಹುಜನ ಚಳುವಳಿ ಸಂಘ ರಿ ಸಂಘಟನೆ ವತಿಯಿಂದ ಧಾರವಾಡ ತಾಲೂಕಿನ ಅಮ್ಮಿನಬಾವಿ ಮತ್ತು ಹಾರುಬೆಳವಡಿ ಗ್ರಾಂ ಪಂಚಾಯಿತಿಗಳಲ್ಲಿ 2018 ರಿಂದ ಇಲ್ಲಿಯವರೆಗೆ ಮಾಡಿದ ಕಾಮಗಾರಿಗಳನ್ನು ಮರು ಪರಿಶೀಲನೆ ಮಾಡಿ ಲೋಕಾಯುಕ್ತ ತನಿಖೆಗೆ ಒತ್ತಾಯಿಸಿ ಮಾನ್ಯ ಜಿಲ್ಲಾಧಿಕಾರಿಗಳು ಧಾರವಾಡ ಹಾಗೂ ಮಾನ್ಯ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಧಾರವಾಡ ರವರಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಪದಾಧಿಕಾರಿಗಳು ಜಿಲ್ಲಾ ಸಮಿತಿ ಪದಾಧಿಕಾರಿಗಳು ಹಾಗೂ ತಾಲೂಕು ಸಮಿತಿ ಪದಾಧಿಕಾರಿಗಳು ಗ್ರಾಂ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು