ನವದೆಹಲಿಸುವರ್ಣ ಗಿರಿ ಟೈಮ್ಸ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಗೆ ಜಾಮೀನು ಮಂಜೂರು.!
ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಜೈಲುಪಾಲಾಗಿರುವಂತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೋಸ್ ಅವನೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್ ನೀಡಿದೆ.
ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದಂತ ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ಬಳಿಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಒಟ್ಟಾರೆಯಾಗಿ ಈಗ ರದ್ದುಪಡಿಸಲಾದ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.