ಬೆಳಗಾವಿಸುವರ್ಣ ಗಿರಿ ಟೈಮ್ಸ್
ಭಾರಿ ಮಳೆ ಹಿನ್ನೆಲೆ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ !
ಬೆಳಗಾವಿ: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ನಾಲ್ಕು ತಾಲೂಕುಗಳ ಅಂಗನವಾಡಿ, ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಿನಾಂಕ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಅವರು ತಿಳಿಸಿದ್ದಾರೆ.
ಈಗಾಗಲೇ ಬೆಳಗಾವಿ ಚಿಕ್ಕೋಡಿ ಬೈಲಹೊಂಗಲ ಕಿತ್ತೂರು, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕುಗಳಲ್ಲಿ ಭಾರೀ ಮಳೆಯ ಕಾರಣ ಶಾಲಾ ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ.