ಯಾದಗಿರಿಸುವರ್ಣ ಗಿರಿ ಟೈಮ್ಸ್
ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ: ನಾಲ್ಕು ವಿದ್ಯಾರ್ಥಿಗಳಿಗೆ ಗಾಯ.

ಯಾದಗಿರಿ: ಇತ್ತೀಚೆಗಷ್ಟೇ ರಾಯಚೂರು ಜಿಲ್ಲೆಯ ಮಾನ್ವಿ ಬಳಿ ನಡೆದ ಶಾಲಾ ಬಸ್ ದುರಂತದ ಕಹಿ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂತಹುದೇ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಇಂದು ನಡೆದಿದೆ.
ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿಯಾದ ಪರಿಣಾಮ ನಾಲ್ಕು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ತಹಶಿಲ್ದಾರ ಕಚೇರಿ ಬಳಿ ನಡೆದಿದೆ. ವೇಗವಾಗಿ ಮುಂದೆ ಬೈಕ್ ಬಂದಿದ್ದರಿಂದ ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ಪಲ್ಟಿಯಾಗಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಂತ್ರಣ ತಪ್ಪಿದ್ದಕ್ಕೆ ರಸ್ತೆಯ ಪಕ್ಕಕ್ಕೆ ಟಂಟಂ ವಾಹನ ಪಲ್ಟಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಶಹಾಪುರ ನಗರದ ಆಟೋ ರಿಕ್ಷಾದಲ್ಲಿದ್ದ ಮಕ್ಕಳು ಡಿಡಿಯು ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.