ಶಿಷ್ಯವೇತನದೊಂದಿಗೆ ಯುಪಿಎಸ್ಸಿ ತರಬೇತಿ; ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ.

ಬೆಂಗಳೂರು: ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಕೇಂದ್ರ ನಾಗರಿಕ ಸೇವಾ ಆಯೋಗ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷಾ ತರಬೇತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಒಟ್ಟು 400 ಪ.ಜಾತಿ ಹಾಗೂ 200 ಪ.ಪಂಗಡದ ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡಿ ಶಿಶ್ಯವೇತನದ ಜತೆಗೆ ಉಚಿತ ತರಬೇತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 21-37 ವರ್ಷದೊಳಗಿರಬೇಕು. ವಾರ್ಷಿಕ ಆದಾಯ 5 ಲಕ್ಷ ರೂ. ಮೀರಿರಬಾರದು. ಅಭ್ಯರ್ಥಿಗಳಿಗೆ 6 ತಿಂಗಳುಗಳ ಕಾಲ ಪೂರ್ವಭಾವಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಬಳಿಕ ಪೂರ್ವಭಾವಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ 3 ತಿಂಗಳು ಮುಖ್ಯ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಈಗಾಗಲೇ ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಪರೀಕ್ಷೆಗೆ ಇಲಾಖೆಯಿಂದ ತರಬೇತಿ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಸುವ ಕೊನೇ ದಿನಾಂಕದೊಳಗೆ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಪಡೆದಿರಬೇಕು. ಅಂಗವಿಕಲ/ ವಿದ್ಯಾರ್ಥಿನಿಲಯ/ ಕ್ರೈಸ್ ವಿದ್ಯಾರ್ಥಿನಿಲಯ/ ಸಫಾಯಿ ಕರ್ಮಚಾರಿ ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಪ್ರಾಧಿಕಾರದಿಂದ ಪ್ರಮಾಣಪತ್ರ ಪಡೆದಿರುವುದು ಕಡ್ಡಾಯವೆಂದು ಸೂಚಿಸಲಾಗಿದೆ. ದೆಹಲಿಯಲ್ಲಿ ತರಬೇತಿ ಪಡೆಯುವವರಿಗೆ 15,000 ರೂ., ಹೈದರಾಬಾದ್ 8,000 ರೂ., ಬೆಂಗಳೂರು 6,000 ರೂ., ಹಾಗೂ ಇತರ ಸ್ಥಳಗಳಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ 5,000 ರೂ. ಮಾಸಿಕ ಶಿಶ್ಯವೇತವನ ನೀಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ https://bit. ly/4fjXK17 ಮೂಲಕ ಅರ್ಜಿ ಸಲ್ಲಿಸಬಹುದು.