ಹೊಟ್ಟೆ ಪಾಡಿಗಾಗಿ ಕೆಲಸಕ್ಕೆ ಬಂದಿದ್ದ ಕಾರ್ಮಿಕನ ದುರಂತ ಅಂತ್ಯ..!!
ಹುಬ್ಬಳ್ಳಿ: ಹೊಟ್ಟೆ ಪಾಡಿಗಾಗಿ ಹಳ್ಳಿಯಿಂದ ಪಟ್ಟಣಕ್ಕೆ ಕೆಲಸಕ್ಕೆ ಬಂದಿದ್ದ ಕಟ್ಟಡ ಕಾರ್ಮಿಕನೊರ್ವ ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಘಟನೆ ನವನಗರದ ಸಹ್ಯಾದ್ರಿ ಕಾಲೋನಿಯಲ್ಲಿ ನಡೆದಿದೆ.
ಗದಗ ಜಿಲ್ಲೆಯ ಶಿರಹಟ್ಟಿ ತಲ್ಲೂಕಿನ ಬೆಳ್ಳಟ್ಟಿ ಗ್ರಾಮದ ನಿವಾಸಿ ವೆಂಕಟೇಶ ಗುಟ್ಟೆಪ್ಪನವರ (41) ಮೃತ ದುರ್ದೈವಿಯಾಗಿದ್ದು, ಈತ ಮನೆಯ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಅವಘಡದಿಂದ ಅಸುನಿಗಿದ್ದಾನೆ.
ಇನ್ನು ವಿದ್ಯುತ್ ಅವ್ಯವಸ್ಥೆ ಬಗ್ಗೆ ಮನೆಯ ಮಾಲಿಕ ಹಾಗೂ ಇಂಜಿನಿಯರ್ ಗೆ ಹಲವಾರು ಬಾರಿ ಗಮನಕ್ಕೆ ತರಲಾಗಿತ್ತಂತೆ. ಆದರೂ ಸಹ ಎಚ್ಚೆತ್ತುಕೊಳ್ಳದ ಮನೆ ಮಾಲಿಕ ಹಾಗೂ ಇಂಜಿನಿಯರ್ ನಿರ್ಲಕ್ಷ್ಯದಿಂದ ಕಟ್ಟಡ ಕಾರ್ಮಿಕನೊರ್ವ ತನ್ನ ಪ್ರಾಣವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಒದಗಿ ಬಂದಿದೆ ಎಂದು ತಿಳಿದುಬಂದಿದೆ.
ಹಿಂದೆ ಕೂಡ ಮೃತ ವೆಂಕಟೇಶ್ ಮಗಳಿಗೂ ವಿದ್ಯುತ್ ಸ್ಪರ್ಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಳಂತೆ, ಇನ್ನು ವಿದ್ಯುತ್ ಸರಬರಾಜು ಇಲಾಖೆಯಿಂದ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಬೆಳಕಿಗೆ ಬಂದಿದೆ.
ಇನ್ನು ಈ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.