ಶಾಲಾ ಸಮಯದಲ್ಲಿ ನಿದ್ರಿಸುತ್ತಾ ವಿದ್ಯಾರ್ಥಿಗಳಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕ !!

ಚೆನ್ನೈ: ಶಿಕ್ಷಕರೊಬ್ಬರು ತಮ್ಮ ಪಾದಗಳನ್ನು ವಿದ್ಯಾರ್ಥಿಗಳ ಬಳಿ ಬಲವಂತವಾಗಿ ಮಸಾಜ್ ಮಾಡಿಸಿಕೊಂಡ ಘಟನೆ ತಮಿಳುನಾಡಿನ ಪೂರ್ವ ರಾಜಪಾಳ್ಯಂನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಜೈ ಪ್ರಕಾಶ್ 17 ವರ್ಷಗಳಿಂದ ಗಣಿತ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ಕೆಲಸದ ಸಮಯದಲ್ಲಿ ಸರಿಯಾಗಿ ಕೆಲಸ ಮಾಡದೇ ನಿದ್ರಿಸುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳ ಬಳಿ ಕಾಲು ಮಸಾಜ್ ಮಾಡಿಸಿಕೊಂಡಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕುಮುದಮ್ ನ್ಯೂಸ್ ಈ ವಿಡಿಯೋವನ್ನು ಹಂಚಿಕೊಂಡಿದೆ. ಘಟನೆಯ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರ ಆದೇಶದ ಆಧಾರದ ಮೇಲೆ ಜಯಪ್ರಕಾಶ್ ಅವರನ್ನು ಅಮಾನತುಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇನ್ನೂ ಯಾವುದೇ ದೂರು ದಾಖಲಾಗಿಲ್ಲ ಎಂದು ವೀರಗನೂರು ಪೊಲೀಸರು ತಿಳಿಸಿದ್ದಾರೆ.
ಅದೇ ರೀತಿ ಪೂರ್ವ ರಾಜಪಾಳ್ಯಂನ ಸರ್ಕಾರಿ ಪ್ರೌಢಶಾಲೆಯಲ್ಲಿ ಒಟ್ಟು 200 ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.