Notice: Function _load_textdomain_just_in_time was called incorrectly. Translation loading for the loginizer domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home2/suvarnagiritimes/public_html/wp-includes/functions.php on line 6114
ಮಾಜಿ ಮುಖ್ಯಮಂತ್ರಿ ಎಸ್ .ಎಂ.ಕೃಷ್ಣ ವಿಧಿವಶ. - suvarna giri times
ಬೆಂಗಳೂರುಸುವರ್ಣ ಗಿರಿ ಟೈಮ್ಸ್

ಮಾಜಿ ಮುಖ್ಯಮಂತ್ರಿ ಎಸ್ .ಎಂ.ಕೃಷ್ಣ ವಿಧಿವಶ.

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ತಡರಾತ್ರಿ ಇಹಲೋಕ ತ್ಯಜಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್‌.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ನಾಳೆ (ಡಿ.11) ಹುಟ್ಟೂರಿನಲ್ಲಿ ನಡೆಯಲಿದೆ.

ಬೆಂಗಳೂರಿನಲ್ಲಿಂದು ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಇರಲಿದೆ. ಬಳಿಕ ಅವರ ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಯಲಿದೆ. ವಿದೇಶದಿಂದ ಅವರ ಪುತ್ರಿ ಮತ್ತು ಸಂಬಂಧಿಕರು ಬರಬೇಕಾಗಿರುವ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಎಸ್.ಎಂ. ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣ ಅವರು ಇತ್ತೀಚಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಸಹ ಪಡೆದುಕೊಂಡಿದ್ದರು. ಚೇತರಿಸಿಕೊಳ್ಳದ ಹಿನ್ನೆಲೆ ಸದಾಶಿವ ನಗರದಲ್ಲಿರುವ ಅವರ ನಿವಾಸದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 2.30ರ ಹೊತ್ತಿಗೆ ವಿಧಿವಶರಾದರು ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.

ಕೃಷ್ಣ ಅವರು 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜಕೀಯ ಜೀವನದಲ್ಲಿ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರಾಗಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ, ಕರ್ನಾಟಕ ವಿಧಾನಸಭಾ ಸ್ಪೀಕ‌ರ್ ಆಗಿಯೂ ಸೇವೆ ಸಲ್ಲಿಸಿದ್ದರು. 2023 ರಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button