Notice: Function _load_textdomain_just_in_time was called incorrectly. Translation loading for the loginizer domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home2/suvarnagiritimes/public_html/wp-includes/functions.php on line 6114
ಸಚಿವೆ ವಿರುದ್ಧ ಅಶ್ಲೀಲ ಪದ ಬಳಕೆ: ಸಿಟಿ ರವಿ ಮೇಲೆ ಹಲ್ಲೆ ಯತ್ನ, ಪೊಲೀಸ್ ಬಂಧನ - suvarna giri times
ಬೆಳಗಾವಿಸುವರ್ಣ ಗಿರಿ ಟೈಮ್ಸ್

ಸಚಿವೆ ವಿರುದ್ಧ ಅಶ್ಲೀಲ ಪದ ಬಳಕೆ: ಸಿಟಿ ರವಿ ಮೇಲೆ ಹಲ್ಲೆ ಯತ್ನ, ಪೊಲೀಸ್ ಬಂಧನ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ನಾಯಕರು ಸಿಟಿ ರವಿ ವಿರುದ್ಧ ಆಕ್ರೋಶಗೊಂಡಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಬಿಗಿಪಟ್ಟು ಹಿಡಿದಿದ್ದಾರೆ.

ರಾಜ್ಯಸಭೆಯಲ್ಲಿ ಅಮಿತ್‌ ಶಾ (Amit Shah) ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ (Vidhan Parishad) ಇಂದು ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದೆ.

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರು ಪ್ರಾಸ್ಟೂ* ಎಂಬ ಪದ ಬಳಕೆ ಮಾಡಿದ್ದಾರೆ. ಈ ಪದವನ್ನು ಬಳಕೆ ಮಾಡಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಸಿಟಿ ರವಿ ವಿರುದ್ಧ ಮುಗಿಬಿದ್ದಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ

Related Articles

Leave a Reply

Your email address will not be published. Required fields are marked *

Back to top button