ಬೆಂಗಳೂರುಸುವರ್ಣ ಗಿರಿ ಟೈಮ್ಸ್
ನಾಳೆ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ಪ್ರಕಟ.

ಬೆಂಗಳೂರು: ಕರ್ನಾಟಕ ಪದವಿ ಪೂರ್ವ- ಶಿಕ್ಷಣ ಇಲಾಖೆಯು 2025ರ ದ್ವಿತೀಯ ಪಿಯುಸಿ ಫಲಿತಾಂಶವನ್ನು (ನಾಳೆ) ಎಪ್ರಿಲ್ 8ರಂದು ಪ್ರಕಟವಾಗಲಿದೆ.
ಮಾರ್ಚ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ನಡೆಸಲಾಗಿತ್ತು. ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸುವ ಸಂಬಂಧ ನಾಳೆ ಮಧ್ಯಾಹ್ನ 12.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸಚಿವರು, ಸಾಕ್ಷರತಾ ಇಲಾಖೆ ಅವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ಲಾಗಿನ್ ವಿವರಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು ಅಥವಾ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in & karresults.nic.in ನಲ್ಲಿ ಪಡೆಯಬಹುದು.