ಬೆಂಗಳೂರುಸುವರ್ಣ ಗಿರಿ ಟೈಮ್ಸ್
ನಾಳೆ ಬೆಳಿಗ್ಗೆ SSLC ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ.

ಬೆಂಗಳೂರು: 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ನಾಳೆ (ಮೇ 02) ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು, ಮಾರ್ಚ್ 2025ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಮೇ 02 ರಂದು ಬೆಳಗ್ಗೆ 11:30ಕ್ಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.
karresults.nic.in ಫಲಿತಾಂಶವನ್ನು ನೋಡಬಹುದಾಗಿದೆ.